ನವದೆಹಲಿ: ಸೆ.9ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರಿಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಅಲ್ಲದೇ ಇದು ಎನ್‌ಡಿಎ ಕೂಟದ ಒಗ್ಗಟಿನ ಪ್ರದರ್ಶನವೂ ಆಗಿದೆ.
ಮಹಾರಾಷ್ಟ್ರದ ಹಾಲಿ ರಾಜ್ಯಪಾಲರು ಆಗಿರುವ ರಾಧಾಕೃಷ್ಣನ್ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸುವ ವೇಳೆ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ , ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಆರೋಗ್ಯ ಸಚಿವ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಮತ್ತು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಉಪಸ್ಥಿತರಿದ್ದು ಬೆಂಬಲ ಸೂಚಿಸಿದ್ದಾರೆ. ಒಟ್ಟು 4 ಸೆಟ್ ಅರ್ಜಿಯನ್ನು ಅಲ್ಲಿಸಲಾಗಿದ್ದು, ಮೊದಲ ಸೆಟ್‌ನಲ್ಲಿ ದಾಖಲೆ ಸಲ್ಲಿಸುವ ವೇಳೆ ಮೋದಿ ಮುಖ್ಯ ಪ್ರತಿಪಾದಕರಾಗಿದ್ದರು.
ನಾಮಪತ್ರ ಸಲ್ಲಿಕೆಗೂ ಮುನ್ನ ರಾಧಾಕೃಷ್ಣನ್ ಅವರು ಸಂಸತ್ ಆವರಣದಲ್ಲಿರುವ ಮಹಾತ್ಮ ಗಾಂಧಿಯವರ ಪ್ರತಿಮೆ ನಮಸ್ಕರಿಸಿದರು. ಜೊತೆಗೆ ಮಹಾನ್ ವ್ಯಕ್ತಿಗಳ ಪುತ್ಥಳಿಗೆ ಗೌರವ ಸಲ್ಲಿಸಿದರು. ಇದನ್ನೂ ಓದಿ: ದೆಹಲಿ ಸಿಎಂಗೆ ಕಪಾಳಮೋಕ್ಷ – ತಿಹಾರ್ ಜೈಲಿನಲ್ಲಿದ್ದ ತನ್ನ ಸಂಬಂಧಿ ಬಿಡಿಸೋದಕ್ಕಾಗಿ ರೇಖಾ ಗುಪ್ತಾ ಭೇಟಿಗೆ ಬಂದಿದ್ದ ವ್ಯಕ್ತಿ
ಕಳೆದ ಭಾನುವಾರ ಸಿ.ಪಿ ರಾಧಾಕೃಷ್ಣನ್ ಅವರನ್ನ ಎನ್‌ಡಿಎ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಾಗಿತ್ತು. ಪಕ್ಷದ ಸಂಸದೀಯ ಮಂಡಳಿ ಸಭೆಯ ನಂತರ ಜೆ.ಪಿ. ನಡ್ಡಾ ಅವರು ಎನ್‌ಡಿಎ ಒಮ್ಮತದ ಅಭ್ಯರ್ಥಿಯಾಗಿ ಘೋಷಣೆ ಮಾಡಿದ್ದರು. ಇದನ್ನೂ ಓದಿ: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ – ʻಕೈʼ ಸಂಸದ ಸಸಿಕಾಂತ್ ಸೆಂಥಿಲ್ ಫಸ್ಟ್ ರಿಯಾಕ್ಷನ್

