ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ (Chikkaballapura) ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಮನೆಯ ಮೇಲೆ ಕಳೆದ ರಾತ್ರಿ ಕಿಡಿಗೇಡಿಗಳು ಕಲ್ಲು ತೂರಾಟ (Stone Pelting) ಮಾಡಿದ್ದಾರೆ.
ಮಂಗಳವಾರಲೋಕ ಸಭೆ ಚುನಾವಣೆ ಫಲಿತಾಂಶದಲ್ಲಿ ಸುಧಾಕರ್ ಅವರು ಪ್ರದೀಪ್ ಈಶ್ವರ್ ಅವರ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಬೆನ್ನಲ್ಲೇ ಚಿಕ್ಕಬಳ್ಳಾಪುರ ನಗರದ ಕಂದವಾರದಲ್ಲಿರುವ ಗೃಹ ಕಚೇರಿ ನಿವಾಸದ ಮೇಲೆ ಕಲ್ಲು ತೂರಾಟ ಮಾಡಲಾಗಿದ್ದು, ಮನೆಯ ಬೃಹತ್ ಗಾತ್ರದ ಕಿಟಕಿ ಗಾಜು ಪುಡಿಪುಡಿಯಾಗಿದೆ. ಇದನ್ನೂ ಓದಿ: ಪ್ರಧಾನಿ ಅಭ್ಯರ್ಥಿಯನ್ನು ನಾವು ನಿರ್ಧರಿಸುತ್ತೇವೆ: ಉದ್ಧವ್ ಠಾಕ್ರೆ

ಕಳೆದ ರಾತ್ರಿ 10:30 ರಿಂದ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಮನೆಗೆ ಚಿಕ್ಕಬಳ್ಳಾಪುರ ಡಿವೈಎಸ್ಪಿ ಶಿವಕುಮಾರ್ ಹಾಗೂ ವೃತ್ತ ನಿರೀಕ್ಷಕ ಮಂಜುನಾಥ್ ಸೇರಿದಂತೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ಎನ್‌ಡಿ ಮಹತ್ವದ ಸಭೆ – ಚಂದ್ರಬಾಬು ನಾಯ್ಡು, ನಿತೀಶ್ ಕುಮಾರ್ ಭಾಗಿ
ಮನೆಯ ಹಿಂಭಾಗದಲ್ಲಿ ಸಿಸಿಟಿವಿ ಅಳವಡಿಸಲಾಗಿದ್ದು, ಕಲ್ಲು ತೂರಾಟ ಮಾಡಿದವರ ಪತ್ತೆಗೆ ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸಿದ್ದಾರೆ. ಲೋಕಸಭಾ ಚುನಾವಣಾ ಫಲಿತಾಂಶದ ಬೆನ್ನಲ್ಲೇ ಈ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಕೇರಳದಲ್ಲಿ ಸುರೇಶ್ ಗೋಪಿಗೆ ಜಯ- ಬಿಜೆಪಿಗೆ ಮೊದಲ ಜಯ

