ವಿಜಯನಗರ: ನಕಲಿ ಕೀ ಬಳಸಿ ಮನೆ ಮುಂದೆ ಹಾಗೂ ರಸ್ತೆಗಳಲ್ಲಿ ನಿಲ್ಲಿಸಿದ್ದ ಬೈಕ್‌ಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಚಿತ್ತಾವಾಡ್ಗಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮಹಮ್ಮದ್ ಇರ್ಫಾನ್ ಎಂದು ಗುರುತಿಸಲಾಗಿದೆ. ಆರೋಪಿ ಮನೆಗಳ ಮುಂದೆ ಹಾಗೂ ರಸ್ತೆಗಳಲ್ಲಿ ನಿಲ್ಲಿಸಿದ ಬೈಕ್‌ಗಳನ್ನು ಟಾರ್ಗೆಟ್ ಮಾಡಿ, ನಕಲಿ ಕೀ ಬಳಸಿ ಹ್ಯಾಂಡಲ್ ಲಾಕ್ ಮುರಿದು ಕಳ್ಳತನ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ಬೈಕ್ ಕಳ್ಳತನ ಮಾಡುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅದನ್ನು ಆಧಾರವಾಗಿಸಿಕೊಂಡು ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಬಳ್ಳಾರಿ, ವಿಜಯನಗರ ಹಾಗೂ ಕೊಪ್ಪಳ ಜಿಲ್ಲೆಗಳ ವಿವಿಧ ಕಡೆಗಳಲ್ಲಿ ನಡೆದಿದ್ದ ಬೈಕ್ ಕಳ್ಳತನ ಪ್ರಕರಣಗಳಲ್ಲಿ ಆರೋಪಿಯ ಸಂಪರ್ಕ ಇರುವುದಾಗಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಬಂಧಿತ ಆರೋಪಿಯಿಂದ ಸುಮಾರು 5 ಲಕ್ಷ ರೂ. ಮೌಲ್ಯದ 11 ಬೈಕ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಚಿತ್ತಾವಾಡ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.

