ವಿಜಯನಗರ:- ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 30ಕ್ಕೂ ಅಧಿಕ ಜನ ಅಸ್ವಸ್ಥಗೊಂಡಿರುವ ಘಟನೆ ಜರುಗಿದೆ. ಕಳೆದ ಮೂರು ದಿನಗಳಿಂದ ಗ್ರಾಮ ಪಂಚಾಯತಿಯಿಂದ ಪೂರೈಕೆಯಾಗುವ ನೀರು ಕುಡಿದು ೩೦ಕ್ಕೂ ಅಧಿಕ ಜನ ಅಸ್ವಸ್ಥಗೊಂಡು ಪರದಾಡುತ್ತಿದ್ದಾರೆ.
ಈ ಹಿನ್ನೆಲೆ ವೈದರ ತಂಡವೊಂದು ಗ್ರಾಮದಲ್ಲಿಯೇ ಬೀಡುಬಿಟ್ಟಿದ್ದು, ಎರಡು ಅಂಬುಲೆನ್ಸ್ ಕೂಡ ಅಲ್ಲಿಯೇ ಇವೆ. ಅಲ್ಲದೇ ಕೆಲವರು ಚಿಕಿತ್ಸೆಗಾಗಿ ವಿಜಯಪುರ, ಬಸವನ ಬಾಗೇವಾಡಿ, ಬಾಗಲಕೋಟೆ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಜೊತೆಗೆ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಓರ್ವನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನೆ ಮಾಡಿಲಾಗಿದೆ. ಊರಿನ ಬಹುತೇಕ ಜನರು ಆಸ್ಪತ್ರೆಗಳಲ್ಲಿ ಠಿಕಾಣಿ ಹೂಡಿದ್ದು, ದಿನೇ ದಿನೇ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ.
- ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
- ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್ಗೆ ಏರುವ ಸಾಧ್ಯತೆ
- ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
- ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
- ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ

