By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಕ್ರೀಡೆ-Sports - ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ

ಕ್ರೀಡೆ-Sports

ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ

Vinod Kambli admitted to Thane hospital in critical condition

Published December 23, 2024
Share
2 Min Read
Vinod Kambli
SHARE

ಮುಂಬೈ : ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಹೀಗಾಗಿ ಅವರನ್ನು ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವು ದಿನಗಳ ಹಿಂದೆ ಅವರು ಗಂಭೀರ ಮೂತ್ರದ ಸೋಂಕಿನಿಂದ ಬಳಲುತ್ತಿರುವುದಾಗಿ ಹೇಳಿಕೊಂಡಿದ್ದರು. ಈಗ ಅವರ ಆರೋಗ್ಯ ಹದಗೆಟ್ಟಿದ್ದು, ಅವರ ಮೇಲೆ ವೈದ್ಯರು ತೀವ್ರ ನಿಗಾ ಇರಿಸಿದ್ದಾರೆ.

ಕೆಲವು ದಿನಗಳ ಹಿಂದೆ ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್ ಮೈದಾನದಲ್ಲಿ ರಮಾಕಾಂತ್ ಅಚ್ರೇಕರ್ ಅವರ ಸ್ಮಾರಕವನ್ನು ಇತ್ತೀಚೆಗೆ ಅನಾವರಣಗೊಳಿಸಲಾಯಿತು. ಈ ಸಮಾರಂಭದಲ್ಲಿ ಸಚಿನ್ ತೆಂಡೂಲ್ಕರ್, ವಿನೋದ್ ಕಾಂಬ್ಳಿ ಸೇರಿದಂತೆ ರಮಾಕಾಂತ್ ಅವರ ಕೋಚಿಂಗ್‌ನಲ್ಲಿ ಬೆಳೆದಿದ್ದ ಪ್ರಸಿದ್ಧ ಕ್ರಿಕೆಟಿಗರು ಉಪಸ್ಥಿತರಿದ್ದರು. ಆ ಸಮಾರಂಭದಲ್ಲೇ ಕಾಂಬ್ಳಿ ತೀವ್ರ ಅನಾರೋಗ್ಯದಿಂದ ಬಳಲುತ್ತಿರುವುದು ಎದ್ದು ಕಾಣುತ್ತಿತ್ತು. ಆತ್ಮೀಯ ಸ್ನೇಹಿತ ಸಚಿನ್ ತೆಂಡೂಲ್ಕರ್ ಅವರನ್ನ ಭೇಟಿಯಾಗಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಇತ್ತೀಚೆಗೆ ಅಭಿಮಾನಿಯೊಬ್ಬರು ವಿನೋದ್ ಕಾಂಬ್ಳಿ ಅವರ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಅವರು ಆಸ್ಪತ್ರೆಯಲ್ಲಿ ದಾಖಲಾಗಿರುವುದನ್ನು ಕಾಣಬಹುದಾಗಿದೆ. ಮಾಧ್ಯಮ ವರದಿಗಳ ಪ್ರಕಾರ, ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. ಕಾಂಬ್ಳಿ ಇತ್ತೀಚೆಗೆ ಯೂಟ್ಯೂಬ್ ಚಾನೆಲ್‌ನ ಸಂದರ್ಶನವೊಂದರಲ್ಲಿ ತಾನು ಗಂಭೀರ ಮೂತ್ರದ ಸೋಂಕಿನಿಂದ ಬಳಲುತ್ತಿದ್ದೇನೆ ಎಂದು ಹೇಳಿಕೊಂಡಿದ್ದರು. ಇದಲ್ಲದೆ ಕಾಂಬ್ಳಿ ಅನೇಕ ಕಾಯಿಲೆಗಳಿಂದ ಬಳಲುತ್ತಿರುವುದಾಗಿಯೂ ಹೇಳಿಕೊಂಡಿದ್ದರು.

ಕುಡಿತದ ಚಟದಿಂದ ವಿನೋದ್ ಕಾಂಬ್ಳಿ ಅವರ ಆರೋಗ್ಯ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಇತ್ತೀಚೆಗೆ, ಕಾಂಬ್ಳಿ ಸ್ಥಿತಿಯನ್ನು ನೋಡಿ, ಟೀಂ ಇಂಡಿಯಾದ ಹಿರಿಯ ಕ್ರಿಕೆಟಿಗ ಕಪಿಲ್ ದೇವ್, 1983 ರ ವಿಶ್ವಕಪ್ ತಂಡದ ಸಹ ಆಟಗಾರರೊಂದಿಗೆ ಕಾಂಬ್ಳಿಗೆ ಸಹಾಯ ಮಾಡುವುದಾಗಿ ಹೇಳಿಕೊಂಡಿದ್ದರು. ಆದರೆ ತಾವು ಸಹಾಯ ಮಾಡಬೇಕೆಂದರೆ ಕಾಂಬ್ಳಿ ರಿಹ್ಯಾಬ್ ಸೆಂಟರ್​ಗೆ ದಾಖಲಾಗಬೇಕು ಎಂಬ ಷರತ್ತನ್ನು ವಿಧಿಸಿದ್ದರು. ಇದರ ನಂತರ, 52 ವರ್ಷದ ವಿನೋದ್ ಕಾಂಬ್ಳಿ ಕೂಡ ಕಪಿಲ್ ದೇವ್ ಅವರ ಪ್ರಸ್ತಾಪವನ್ನು ಒಪ್ಪಿಕೊಂಡು ಸಹಾಯಕ್ಕಾಗಿ ಕೃತಜ್ಞತೆ ವ್ಯಕ್ತಪಡಿಸಿದ್ದರು. ಪುನರ್ವಸತಿಗೆ ಹೋಗಲು ಸಿದ್ಧರಾಗಿದ್ದ ಕಾಂಬ್ಳಿ ಇದೀಗ ಮತ್ತೆ ತೀವ್ರ ಅನಾರೋಗ್ಯಕ್ಕೀಡಾಗಿದ್ದಾರೆ.

ವಿನೋದ್ ಕಾಂಬ್ಳಿ ಅವರ ಕ್ರಿಕೆಟ್ ಜೀವನ
1991 ರಲ್ಲಿ ಏಕದಿನ ಕ್ರಿಕೆಟ್​ಗೆ ಪದಾರ್ಪಣೆ ಮಾಡುವ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್​ ಬದುಕಿಗೆ ಮುನ್ನುಡಿ ಬರೆದಿದ್ದ ಕಾಂಬ್ಳಿ ಇದಾದ ಬಳಿಕ 1993ರಲ್ಲಿ ಟೀಂ ಇಂಡಿಯಾ ಪರ ಟೆಸ್ಟ್‌ಗೆ ಪದಾರ್ಪಣೆ ಮಾಡಿದ್ದರು. ಟೀಂ ಇಂಡಿಯಾ ಪರ ಒಟ್ಟು 17 ಟೆಸ್ಟ್ ಮತ್ತು 104 ಏಕದಿನ ಪಂದ್ಯಗಳನ್ನು ಆಡಿರುವ ಅವರು ಟೆಸ್ಟ್‌ನಲ್ಲಿ ಒಟ್ಟು 1084 ರನ್ ಮತ್ತು ಏಕದಿನದಲ್ಲಿ 2477 ರನ್ ಗಳಿಸಿದ್ದಾರೆ. ವೃತ್ತಿಜೀವನದ ಆರಂಭದಲ್ಲಿ ಕಾಂಬ್ಳಿ ಸಾಕಷ್ಟು ಖ್ಯಾತಿಯನ್ನು ಗಳಿಸಿದ್ದರು. ಆದರೆ ಮದ್ಯದ ಚಟದಿಂದಾಗಿ ಅವರ ವೃತ್ತಿಜೀವನವು ಹೆಚ್ಚು ಕಾಲ ಉಳಿಯಲಿಲ್ಲ

You Might Also Like

ಸತತ 8 ಅರ್ಧಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಲಂಕಾ ಕ್ರಿಕೆಟರ್ ಮೆಂಡಿಸ್‌

ಐಪಿಎಲ್ 2026 : ಸಿಎಸ್‌ಕೆ ವಿರುದ್ಧ ಗೆದ್ದು ಬೀಗಿದ ಆರ್‌ಸಿಬಿ

ಸ್ವಿಜರ್‌ಲ್ಯಾಂಡಿನ ಜ್ಯೂರಿಚ್‌ನಲ್ಲಿ ನಡೆದ ಜಾವೆಲಿನ್ ಎಸೆತದಲ್ಲಿ ಬೆಳ್ಳಿ ಪದಕಗೆದ್ದ ನೀರಜ್ ಚೋಪ್ರಾ

ರೋಹಿತ್‌ ಶರ್ಮಾ ಟಿ20 ದಾಖಲೆ ಸರಿಗಟ್ಟಿದ ಗ್ಲೆನ್‌ ಮ್ಯಾಕ್ಸ್‌ವೆಲ್‌

ಇಂದು ಟಿ20 ವಿಶ್ವಕಪ್‌ ‘ಫೈನಲ್‌ ವಾರ್‌’ : ಟೀಮ್ ಇಂದಿಗೆ ಗೆಲುವಿಗಾಗಿ ಹೋಮ-ಹವನ

TAGGED:Vinod Kambli
Share This Article
Facebook Copy Link Print
Previous Article Sriram Krishnan ಮತ್ತೊಬ್ಬ ಭಾರತ ಮೂಲದ ವ್ಯಕ್ತಿಗೆ ಮಹತ್ವದ ಹುದ್ದೆ ನೀಡಿದ ಟ್ರಂಪ್, AI ಸಲಹೆಗಾರನಾಗಿ ಶ್ರೀರಾಮ್‌ ಕೃಷ್ಣನ್ ನೇಮಕ
Next Article Mother ಮಗನ ಸಾವಿನ ಸುದ್ದಿ ಕೇಳಿ ಕುಸಿದು ಬಿದ್ದು ಪ್ರಾಣಬಿಟ್ಟ ತಾಯಿ..!
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up