ಮುಂಬೈ: ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರು ಅಭಿಮಾನಿಗಳೊಂದಿಗೆ ಸೌಜನ್ಯದಿಂದ ವರ್ತಿಸುತ್ತಿಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ.
ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಒಂದು ವಿಡಿಯೋದಲ್ಲಿ ವಿರಾಟ್ ಕೊಹ್ಲಿ ಅವರು ಭದ್ರತಾ ಸಿಬ್ಬಂದಿಗೆ ತಿರಸ್ಕಾರಭಾವದಿಂದ ವರ್ತಿಸಿರುವುದು ಕಂಡುಬಂದಿದೆ. ಅಲಿಬಾಗ್‌ಗೆ ತೆರಳುತ್ತಿದ್ದ ವಿರಾಟ್ ಕೊಹ್ಲಿಯನ್ನು ಅಭಿಮಾನಿಗಳು ಸುತ್ತುವರೆದಿದ್ದರು. ಈ ವೇಳೆ ಒಬ್ಬ CISF ಅಧಿಕಾರಿ ಆತನ ಬಳಿ ಸೆಲ್ಪಿ ತೆಗೆದುಕೊಳ್ಳಲು ಬಯಸಿದ್ದರು. ಆದರೆ ಅವರ ಮನವಿಯನ್ನು ನಿರಾಕರಿಸಿ ವಿರಾಟ್ ಮುಂದೆ ಸಾಗಿದ್ದಾರೆ.
ಈ ಘಟನೆಯ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ವಿಭಿನ್ನ ಅಭಿಪ್ರಾಯಗಳಿವೆ. ಕೆಲವರು ಅವರ ನಡವಳಿಕೆಯನ್ನು ಖಂಡಿಸಿದ್ದಾರೆ. ವಿರಾಟ್ ಕೊಹ್ಲಿ ವಿಶ್ವ ಕ್ರಿಕೆಟ್‌ನಲ್ಲೇ ಅತ್ಯಂತ ಜನಪ್ರಿಯ ಆಟಗಾರ. ಕ್ರಿಕೆಟ್‌ನಲ್ಲಿ ಫಾರ್ಮ್ ಕಳೆದುಕೊಂಡು ಪರದಾಡುತ್ತಿದ್ದರೂ ಅಭಿಮಾನ ಮಾತ್ರ ಯಾರಿಗೂ ಕಡಿಮೆಯಾಗಿಲ್ಲ.

