By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: TOP STORY : ಲೋಕಸಭೆಯಲ್ಲಿ ಸುದೀರ್ಘ ಚರ್ಚೆ ಬಳಿಕ ವಕ್ಫ್​ ತಿದ್ದುಪಡಿ ಮಸೂದೆ ಅಂಗೀಕಾರ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಷ್ಟ್ರೀಯ-National > TOP STORY : ಲೋಕಸಭೆಯಲ್ಲಿ ಸುದೀರ್ಘ ಚರ್ಚೆ ಬಳಿಕ ವಕ್ಫ್​ ತಿದ್ದುಪಡಿ ಮಸೂದೆ ಅಂಗೀಕಾರ
LatestMain PostTop Storiesರಾಷ್ಟ್ರೀಯ-National

TOP STORY : ಲೋಕಸಭೆಯಲ್ಲಿ ಸುದೀರ್ಘ ಚರ್ಚೆ ಬಳಿಕ ವಕ್ಫ್​ ತಿದ್ದುಪಡಿ ಮಸೂದೆ ಅಂಗೀಕಾರ

Waqf Amendment Bill passed in Lok Sabha after long debate

Published April 3, 2025
Share
2 Min Read
Waqf Amendment Bill
SHARE

ನವದೆಹಲಿ : ಲೋಕಸಭೆಯಲ್ಲಿ ಸತತ 12 ಗಂಟೆಗಳ ಕಾಲ ನಡೆದ ಚರ್ಚೆ ಬಳಿಕ ವಕ್ಫ್​ ತಿದ್ದುಪಡಿ ಮಸೂದೆಗೆ ಅಂಗೀಕಾರ ದೊರೆಯಿತು. ಇಂದು ರಾಜ್ಯಸಭೆಯಲ್ಲಿ ಮಸೂದೆ ಮಂಡನೆಯಾಗಲಿದೆ. ಮಸೂದೆಯ ಪರವಾಗಿ 288 ಮತಗಳು ಚಲಾವಣೆಗೊಂಡರೆ, ವಿರುದ್ಧವಾಗಿ 232 ಮತಗಳು ಚಲಾವಣೆಯಾದವು.

ಸದನವು ವಿರೋಧ ಪಕ್ಷದ ಎಲ್ಲಾ ತಿದ್ದುಪಡಿಗಳನ್ನು ಧ್ವನಿ ಮತದ ಮೂಲಕ ತಿರಸ್ಕರಿಸಿತು. ವಿರೋಧ ಪಕ್ಷದ ಸಂಸದ ಎನ್.ಕೆ. ಪ್ರೇಮಚಂದ್ರನ್ ಅವರ ತಿದ್ದುಪಡಿ ಪ್ರಸ್ತಾವನೆಯ ಮೇಲೆ ಬೆಳಗಿನ ಜಾವ 1.15 ಕ್ಕೆ ಮತದಾನ ನಡೆಯಿತು.

ಇದನ್ನು 231 ವಿರುದ್ಧ 288 ಮತಗಳಿಂದ ತಿರಸ್ಕರಿಸಲಾಯಿತು. ಮಂಡಳಿಯಲ್ಲಿ ಮುಸ್ಲಿಮೇತರ ಸದಸ್ಯರು ಇರಬಾರದು ಎಂಬ ಪ್ರಸ್ತಾವನೆ ಇತ್ತು. ಲೋಕಸಭೆಯಲ್ಲಿ ಈ ಮಸೂದೆಯ ಬಗ್ಗೆ 12 ಗಂಟೆಗಳಿಗೂ ಹೆಚ್ಚು ಕಾಲ ಚರ್ಚೆ ನಡೆಯಿತು. ಈಗ ಮಸೂದೆಯನ್ನು ಇಂದು ಅಂದರೆ ಗುರುವಾರ ರಾಜ್ಯಸಭೆಯಲ್ಲಿ ಮಂಡಿಸಲಾಗುವುದು.

ಇನ್ನು ಸಂಸತ್ತಿನ ಕೆಳಮೆನೆಯಲ್ಲಿ ಎಲೆಕ್ಟ್ರಾನಿಕ್ ಮತದಾನದ ಮೂಲಕ ನಡೆದ ಪ್ರಕ್ರಿಯೆಯಲ್ಲಿ ಮಸೂದೆಗೆ 288 ಮತಗಳು ಒಲಿದವು, ಆದರೆ ಇನ್ನೊಂದೆಡೆ 232 ಸದಸ್ಯರು ವಿರೋಧಿಸಿದರು. ಇದರೊಂದಿಗೆ, ಅಸಾದುದ್ದೀನ್ ಓವೈಸಿ ಮತ್ತು ಗೌರವ್ ಗೊಗೊಯ್ ಅವರ ತಿದ್ದುಪಡಿಗಳನ್ನು ತಿರಸ್ಕರಿಸಲಾಯಿತು. ಜೊತೆಗೆ ಕೆ.ಸಿ. ವೇಣುಗೋಪಾಲ್ ಮತ್ತು ಸೌಗತ ರಾಯ್ ಅವರು ಮಸೂದೆಯಲ್ಲಿ ಒತ್ತಾಯಿಸಿದ ತಿದ್ದುಪಡಿಗಳು ಸಹ ಸ್ವೀಕರಿಸಲಾಗಿಲ್ಲ.

ಇನ್ನು ಮಸೂದೆ ಮಂಡಿಸಿದ ಕಿರಣ್‌ ರಿಜಿಜು ಅವರು, ʼʼಮಸೂದೆಯಿಂದ ದೇಶದಲ್ಲಿರುವ ಯಾವುದೇ ಮಸೀದಿಗೆ ತೊಂದರೆಯುಂಟಾಗುವುದಿಲ್ಲ. ಮಸೂದೆ ಮಂಡನೆಗೆ ಆಗತ್ಯವಾದ ಎಲ್ಲ ಕಾನೂನು ಕ್ರಮವನ್ನು ನಾವು ಅನುಸರಿಸಿದ್ದೇವೆ. ವಕ್ಫ್‌ ಮಸೂದೆಯನ್ನು ಸಂಸತ್‌ ಅನುಮೋದಿಸಿದೆʼʼ ಎಂದರು.

ʼʼ25 ರಾಜ್ಯಗಳ ವಕ್ಫ್‌ ಬೋರ್ಡ್‌ ಅಭಿಪ್ರಾಯವನ್ನು ನಾವು ಸಂಗ್ರಹಿಸಿದ್ದೇವೆ. ಜಂಟಿ ಸಂಸದೀಯ ಸಮಿತಿ (ಜೆಪಿಸಿ)ಯ ಎರಡೂ ಸದನಗಳ ಸದಸ್ಯರನ್ನು ನಾನು ಅಭಿನಂದಿಸಲು ಬಯಸುತ್ತೇನೆ. ಒಟ್ಟಾರೆಯಾಗಿ, 25 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ವಕ್ಫ್ ಮಂಡಳಿಗಳ 284 ನಿಯೋಗಗಳು ಜೆಪಿಸಿಯಲ್ಲಿ ತಮ್ಮ ವಾದಗಳನ್ನು ಮಂಡಿಸಿದ್ದವು. ಅವುಗಳನ್ನು ಪರಿಗಣಿಸಿಯೇ ಮಸೂದೆಯನ್ನು ರಚಿಸಲಾಗಿದೆʼʼ ಎಂದು ತಿಳಿಸಿದರು.

ಬೆಳಿಗ್ಗೆ 11 ಗಂಟೆಗೆ ಆರಂಭವಾದ ಸದನದ ಕಲಾಪದಲ್ಲಿ ಆಡಳಿತ ಪಕ್ಷವಾದ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಈ ಮಸೂದೆಯನ್ನು “ವಕ್ಫ್ ಆಸ್ತಿಗಳ ನಿರ್ವಹಣೆಯಲ್ಲಿ ಪಾರದರ್ಶಕತೆ ಮತ್ತು ಜವಾಬ್ದಾರಿತನ ತರುವ ಒಂದು ಕ್ರಾಂತಿಕಾರಿ ಹೆಜ್ಜೆ” ಎಂದು ಬಣ್ಣಿಸಿದರೆ, ವಿರೋಧ ಪಕ್ಷಗಳಾದ ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದ ಸದಸ್ಯರು ಇದನ್ನು “ಮುಸ್ಲಿಂ ಸಮುದಾಯದ ಧಾರ್ಮಿಕ ಸ್ವಾಯತ್ತತೆಯ ಮೇಲಿನ ದಾಳಿ” ಎಂದು ಟೀಕಿಸಿದರು.

ಮುಂದಿನ ಪರಿಶೀಲನೆಗಾಗಿ ರಾಜ್ಯಸಭೆಗೆ ವರ್ಗ
ಜೊತೆಗೆ ಮಸೂದೆಯ ಮುಖ್ಯ ಅಂಶಗಳಾದ ವಕ್ಫ್ ಆಸ್ತಿಗಳ ಸರ್ವೆಗೆ ಜಿಲ್ಲಾಧಿಕಾರಿಗಳ ನೇಮಕ, ಆಸ್ತಿ ನೋಂದಣಿಗೆ ಆರು ತಿಂಗಳ ಕಾಲಾವಕಾಶ, ಮತ್ತು ಸರ್ಕಾರಿ ಆಸ್ತಿಗಳನ್ನು ವಕ್ಫ್ ಆಸ್ತಿ ಎಂದು ಪರಿಗಣಿಸದಿರುವ ನಿಬಂಧನೆಗಳು ಚರ್ಚೆಯ ಕೇಂದ್ರಬಿಂದುವಾಗಿದ್ದವು. ಇನ್ನು ಸ್ಪೀಕರ್ ಓಂ ಬಿರ್ಲಾ ಅವರು ಮಸೂದೆಯ ಅಂಗೀಕಾರವನ್ನು ಘೋಷಿಸಿ, ರಾಜ್ಯಸಭೆಗೆ ಮುಂದಿನ ಪರಿಶೀಲನೆಗಾಗಿ ಕಳುಹಿಸಿದರು.

You Might Also Like

ಪ್ರಧಾನಿ ಮೋದಿ ಹುಟ್ಟುಹಬ್ಬ : ರಾಷ್ಟಪತಿ ಮುರ್ಮು, ಕಾಂಗ್ರೆಸ್‌‍ ಅಧ್ಯಕ್ಷ ಖರ್ಗೆ ಸೇರಿದಂತೆ ಗಣ್ಯರಿಂದ ಶುಭಾಶಯ

14 ಗಂಟೆ ಕೆಲಸಕ್ಕೆ ಬಾರಿ ವಿರೋಧ, ಪ್ರತಿಭಟನೆಗೆ ಮುಂದಾದ ಐಟಿ ಉದ್ಯೋಗಿಗಳು

ನರೇಗಾ ಹೆಸರು–ಸ್ವರೂಪ ಬದಲಾವಣೆಗೆ ವಿರೋಧಿಸಿ ಬಾಗಲಕೋಟೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ

ಖ್ಯಾತ ಜನಪದ ಕಲಾವಿದ, ನಟ ಗುರುರಾಜ್ ಹೊಸಕೋಟೆ ಕಾರು ಅಪಘಾತ

ರಾಜ್ಯದ ಪ್ರಸ್ತುತ ಪರಿಸ್ಥಿತಿ ನೋಡಿದರೆ ದುಃಖವಾಗುತ್ತದೆ : ಈಶ್ವರಪ್ಪ

TAGGED:Waqf Amendment BillWaqf Bill
Share This Article
Facebook Copy Link Print
Previous Article Top 10 News ಇಂದಿನ ಟಾಪ್ 10 ಸುದ್ದಿಗಳು (02-04-2025)
Next Article India faces 26% US tariff as Trump praises PM Modi but demands ‘fair trade’ ಭಾರತಕ್ಕೂ ಶಾಕ್ ಕೊಟ್ಟ ಟ್ರಂಪ್, ಶೇ. 26ರಷ್ಟು ಪ್ರತೀಕಾರದ ಸುಂಕ ಹೇರಿಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ರಾಜ್ಯ-Karnataka Latest
February 4, 2026
ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
ವಿದೇಶ-International
February 4, 2026
ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up