ನವದೆಹಲಿ: ಕೇಂದ್ರ ಬಜೆಟ್ ನ್ನು ಮಧ್ಯಮ ವರ್ಗ, ಹಿಂದುಳಿದ ವರ್ಗಗಳ ವಿರೋಧಿ ಬಜೆಟ್ ಎಂದು ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ಟೀಕಾ ಪ್ರಹಾರ ನಡೆಸಿದರು. ಸಂಸತ್ ಕಲಾಪದಲ್ಲಿ ಬಜೆಟ್ ಮೇಲಿನ ಚರ್ಚೆಯ ವೇಳೆ ರಾಹುಲ್ ಗಾಂಧಿ ಭಾಷಣ ಮಾಡುತ್ತಿರಬೇಕಾದರೆ, ನಿರ್ಮಲಾ ಸೀತಾರಾಮನ್ ತಲೆ ಚಚ್ಚಿಕೊಂಡ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.
ಬಜೆಟ್ ತಯಾರಿಕೆಯ ತಂಡದಲ್ಲಿ ವೈವಿಧ್ಯತೆಯ ಕೊರತೆಯ ಬಗ್ಗೆ ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ ರಾಹುಲ್ ಗಾಂಧಿ, ಒಳಗೊಳ್ಳುವಿಕೆಗೆ ಸಂಬಂಧಿಸಿದಂತೆ ಮೋದಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ.
ತಮ್ಮ ಆರೋಪಗಳನ್ನು ಸಮರ್ಥಿಸಿಕೊಳ್ಳುವುದಕ್ಕೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಬಜೆಟ್ ಪೂರ್ವದಲ್ಲಿ ನಡೆಯುವ ಸಾಂಪ್ರದಾಯಿಕ ಹಲ್ವಾ ಸಮಾರಂಭದ ಪೋಸ್ಟರ್ ನ್ನು ಪ್ರದರ್ಶಿಸಿದ್ದು, ಬಜೆಟ್ ತಯಾರಿಕೆಯ ತಂಡದಲ್ಲಿದ್ದ 20 ಅಧಿಕಾರಿಗಳ ಪೈಕಿ ದಲಿತರು, ಒಬಿಸಿ, ಆದಿವಾಸಿಗಳ ಅನುಪಸ್ಥಿತಿಯನ್ನು ರಾಹುಲ್ ಗಾಂಧಿ ಉಲ್ಲೇಖಿಸಿದರು.

ಕ್ಷಮೆಗೆ ಕಾಂಗ್ರೆಸ್ ಒತ್ತಾಯ :
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬಜೆಟ್ ಅನ್ನು ಟೀಕಿಸಿರುವ ರಾಹುಲ್ ಗಾಂಧಿ ಅವರ ಮಾತನ್ನು ಕೇಳಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮುಖ ಮುಚ್ಚಿಕೊಂಡು ನಗುತ್ತಿರುವ ವಿಡಿಯೋ ಎಲ್ಲ ಕಡೆ ಹರಿದಾಡುತ್ತಿದೆ. ಇದಕ್ಕೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದ್ದು, ಸಚಿವೆ ನಿರ್ಮಲಾ ಸೀತಾರಾಮನ್ ಕ್ಷಮೆ ಕೋರಬೇಕೆಂದು ಒತ್ತಾಯಿಸಿದೆ.