ಮಂಡ್ಯ : ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯಲ್ಲಿ ಡಿಜೆಗೆ ಭರ್ಜರಿ ಸ್ಟೆಪ್ಸ್ ಹಾಕುತ್ತಿದ್ದ ವ್ಯಕ್ತಿ ಒಬ್ಬರು ಹೃದಯಾಘಾತದಿಂದ ಉಸಿರು ಚೆಲ್ಲಿದ್ದಾರೆ. ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ ಜೊತ್ತನಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯಲ್ಲಿ ಮಂಜುನಾಥ್ ಭರ್ಜರಿ ಡ್ಯಾನ್ಸ್ ಮಾಡುತ್ತಿದ್ದರು. ಮೆರವಣಿಗೆಯಲ್ಲಿ ಯುವಕರರೊಂದಿಗೆ ಡಿಜೆ ಹಾಡುಗಳಿಗೆ ಮಂಜುನಾಥ್ ಕುಣಿದುಕೊಂಡು ಬರುತ್ತಿದ್ದರು. ಆದರೆ ಡ್ಯಾನ್ಸ್ ಮಾಡುತ್ತಿದ್ದಾಗಲೇ ಹಠಾತ್ ಹೃದಯಾಘಾತ ಸಂಭವಿಸಿದೆ.

