ನವದೆಹಲಿ: ಗಡಿ ಉದ್ವಿಗ್ನತೆ ತಾರಕಕ್ಕೇರಿರುವ ನಡುವೆಯೇ Khawaja Asif ಅವರು ಭಾರತಕ್ಕೆ ಬಹಿರಂಗ ಬೆದರಿಕೆ ಹಾಕಿರುವುದು ಆತಂಕಕ್ಕೆ ಕಾರಣವಾಗಿದೆ.
ಮುಂದಿನ ಬಾರಿ ಉಭಯ ರಾಷ್ಟ್ರಗಳ ನಡುವೆ ಸಂಘರ್ಷ ನಡೆದರೆ ಅದು ಕೇವಲ 200-250 ಕಿಮೀ ವ್ಯಾಪ್ತಿಗೆ ಸೀಮಿತವಾಗುವುದಿಲ್ಲ. ನಾವು ಭಾರತದ ಗಡಿಯೊಳಗೆ ನುಗ್ಗಿ, ಮನೆಗಳೊಳಗೆ ಹಾಗೂ ಆರ್‌ಎಸ್‌ಎಸ್ ಶಿಬಿರಗಳ ಮೇಲೆ ದಾಳಿ ನಡೆಸುತ್ತೇವೆ ಎಂದು ಅವರು ಹೇಳಿದ್ದಾರೆ.
ಇದಕ್ಕೂ ಮುನ್ನ Pakistan ಗಡಿಯಲ್ಲಿ ಯಾವುದೇ ದುಸ್ಸಾಹಸಕ್ಕೆ ಮುಂದಾದರೆ ಹಿಂದೆಂದೂ ಕಾಣದ ರೀತಿಯಲ್ಲಿ ತಕ್ಕ ಪ್ರತ್ಯುತ್ತರ ನೀಡಲಾಗುವುದು ಎಂದು Rajnath Singh ಖಡಕ್ ಎಚ್ಚರಿಕೆ ನೀಡಿದ್ದರು.
ಈ ಬೆಳವಣಿಗೆಯ ಬೆನ್ನಲ್ಲೇ ಆಸಿಫ್ ಅವರ ಹೇಳಿಕೆ ಮತ್ತಷ್ಟು ಉದ್ವಿಗ್ನತೆಯನ್ನು ಹೆಚ್ಚಿಸಿದೆ. ಇದೇ ವೇಳೆ, ಪಾಕಿಸ್ತಾನದ ಮಾಜಿ ರಾಯಭಾರಿ Abdul Basit ಕೂಡ ಅಮೆರಿಕ ಪಾಕ್ ಮೇಲೆ ದಾಳಿ ಮಾಡಿದರೆ ದೆಹಲಿ ಮತ್ತು ಮುಂಬೈ ನಗರಗಳ ಮೇಲೆ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.

