ಬೆಂಗಳೂರು : ವೈಯಾಲಿಕಾವಲ್ ಮಹಾಲಕ್ಷ್ಮಿ ಬೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಈ ಬಗ್ಗೆ ಮಾತನಾಡಿದ ಅವರು, ಮಹಾಲಕ್ಷ್ಮಿ ಭೀಕರ ಹತ್ಯೆ ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತಿದೆ.. ಈಗಾಗಲೇ ಪೊಲೀಸರು ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಳಿವು ಸಂಗ್ರಹಿಸಿದ್ದಾರೆ. ಒಬ್ಬ ವ್ಯಕ್ತಿ ಇದರಲ್ಲಿ ಭಾಗಿಯಾಗಿದ್ದಾನೆ ಅಂತ ಹೇಳಲಾಗಿದೆ ಎಂದರು. ಇಬ್ಬರಿದ್ದಾರೋ, ಒಬ್ಬರಿದ್ದಾರೋ ಎಂಬುವುದನ್ನು ನೋಡಬೇಕು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದರು.
ಆದರೆ ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಾನು ಹೊರಗಡೆ ಹೇಳೋದಕ್ಕೆ ಆಗಲ್ಲ.. ಶೀಘ್ರದಲ್ಲೇ ಆರೋಪಿಯನ್ನು ಬಂಧಿಸುತ್ತೇವೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು.
ಬೆಂಗಳೂರಿನ ವೈಯಾಲಿಕಾವಲ್‌ನಲ್ಲಿ ಮಹಾಲಕ್ಷ್ಮಿ ಎಂಬ ಮಹಿಳೆಯ ಭೀಕರ ಹತ್ಯೆಯಾಗಿದೆ. ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿ ಇಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸದ್ಯ ಪ್ರಕರಣದಕ್ಕೆ ಸಂಬಂಧಿಸಿದಂತೆ ಅನುಮಾನಿತ ಕೆಲವರ ಮೇಲೆ ಪೊಲೀಸರು ನಿಗಾ ಇಟ್ಟಿದ್ದಾರೆ. ಕೆಲವರನ್ನು ವಿಚಾರಣೆಗೂ ಒಳಪಡಿಸಿದ್ದಾರೆ. ಆದರೆ ಯಾರು ಈ ಕೃತ್ಯವನ್ನು ಎಸಗಿದ್ದಾರೆ ಎಂಬ ಬಗ್ಗೆ ಮಾಹಿತಿ ಇನ್ನೂ ಪೊಲೀಸರಿಗೆ ಸಿಕ್ಕಿಲ್ಲ. ಅಲ್ಲದೆ, ಆರೋಪಿ ವ್ಯವಸ್ಥಿತವಾಗಿ ಕೃತ್ಯ ಎಸಗಿರುವ ಹಿನ್ನೆಲೆಯಲ್ಲಿ ಎಫ್‌ಎಸ್‌ಎಲ್ ತಂಡಕ್ಕೂ ಸುಳಿವು ಸಿಕ್ಕಿಲ್ಲ.

