By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಚಾಮರಾಜನಗರ ಬಂದಾಗಲೆಲ್ಲ ನನ್ನ ಸಿಎಂ ಕುರ್ಚಿ ಗಟ್ಟಿಯಾಗಿದೆ : ಸಿದ್ದರಾಮಯ್ಯ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಚಾಮರಾಜನಗರ ಬಂದಾಗಲೆಲ್ಲ ನನ್ನ ಸಿಎಂ ಕುರ್ಚಿ ಗಟ್ಟಿಯಾಗಿದೆ : ಸಿದ್ದರಾಮಯ್ಯ

BlogLatestರಾಜ್ಯ-Karnataka

ಚಾಮರಾಜನಗರ ಬಂದಾಗಲೆಲ್ಲ ನನ್ನ ಸಿಎಂ ಕುರ್ಚಿ ಗಟ್ಟಿಯಾಗಿದೆ : ಸಿದ್ದರಾಮಯ್ಯ

Whenever I visit Chamarajanagar, my CM's chair is secure: Siddaramaiah

Published April 25, 2025
Share
2 Min Read
Siddaramaiah Siddaramaiah Siddaramaiah
SHARE

ಚಾಮರಾಜನಗರ: ನನಗೆ ಚಾಮರಾಜನಗರ ಅತ್ಯಂತ ಇಷ್ಟವಾದ ಜಿಲ್ಲೆ. ಚಾಮರಾಜನಗರಕ್ಕೆ 20 ಸಾರಿ ಬಂದು, ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೇನೆ, “ಚಾಮರಾಜನಗರಕ್ಕೆ ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ ಅಷ್ಟೇ. ಇಲ್ಲಿಗೆ ಬಂದಾಗಲೆಲ್ಲ ನನ್ನ ಕುರ್ಚಿ ಗಟ್ಟಿಯಾಗಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಸುತ್ತೂರು ಮಠಕ್ಕೆ ಭೇಟಿ ನೀಡಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. “ಚಾಮರಾಜನಗರಕ್ಕೆ ಭೇಟಿ ನೀಡಿದ್ರೆ ಅಧಿಕಾರ ಹೋಗುತ್ತದೆ ಎಂಬುದರಲ್ಲಿ ಯಾವುದೇ ಸತ್ಯವಿಲ್ಲ. ಈ ಮೌಢ್ಯಗಳಿಂದಲೇ ಸಮಾಜದಲ್ಲಿ ಪ್ರಗತಿಗೆ ಅಡ್ಡಿಯಾಗಿದೆ. ನಾನು ಮೊದಲ ಬಾರಿಗೆ ಸಿಎಂ ಆಗಿದ್ದಾಗ 15ಕ್ಕೂ ಹೆಚ್ಚು ಬಾರಿ ಜಿಲ್ಲೆಗೆ ಭೇಟಿ ನೀಡಿದ್ದೆ” ಎಂದರು.

“ಮಲೆ ಮಹದೇಶ್ವರ ಬೆಟ್ಟದ ಪ್ರಾಧಿಕಾರದ ಸಭೆಯಲ್ಲಿ ಹಲವು ಸುಧಾರಣಾ ಕ್ರಮಗಳಿಗೆ ಸೂಚನೆ ನೀಡಿದ್ದೇನೆ. ಶುಚಿತ್ವ, ಮದ್ಯ ನಿಷೇಧ, ತಿರುಪತಿ ರೀತಿಯಲ್ಲಿ ಲಾಡುಗಳನ್ನು ತಯಾರಿಸಿ ಕಡಿಮೆ ದರದಲ್ಲಿ ನೀಡಲು ತಿಳಿಸಿದ್ದೇನೆ. ಮೂಲಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡುವಂತೆಯೂ ತಿಳಿಸಿದ್ದೇನೆ” ಎಂದು ಹೇಳಿದರು.

ಎಲ್ಲಾ ಜಾತಿ ಮತ್ತು ಎಲ್ಲಾ ಧರ್ಮದ ಬಡವರಿಗೆ ನೆರವಾಗುವ ರೀತಿಯಲ್ಲಿ ಹಾಸ್ಟೆಲ್ ಮತ್ತು ಶಿಕ್ಷಣ ಸಂಸ್ಥೆಗಳನ್ನು ನಿರ್ಮಿಸಿ. ಇದರಿಂದ ಅಂಬೇಡ್ಕರ್ ಅವರ ಸಮಾನತೆಯ ಅವಕಾಶ ಈಡೇರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಜಿಲ್ಲಾ ಕುರುಬರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಕನಕ ಸಮುದಾಯ ಭವನಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಈಗಾಗಲೇ 2 ಕೋಟಿ ರೂಪಾಯಿಯಲ್ಲಿ 50 ಲಕ್ಷ ರೂಪಾಯಿ ಬಿಡುಗಡೆ ಆಗಿದೆ. ಹಲವರು ದೇಣಿಗೆ ಕೂಡ ಕೊಟ್ಟಿದ್ದಾರೆ. ಇವರೆಲ್ಲರಿಗೂ ಒಳ್ಳೆಯದಾಗಲಿ ಎಂದರು.

ಸಮುದಾಯ ಭವನ ಕಟ್ಟಿ. ಆದರೆ, ಇದಕ್ಕಿಂತ ಹೆಚ್ಚಾಗಿ ಹಾಸ್ಟೆಲ್ ಮತ್ತು ಶಿಕ್ಷಣ ಸಂಸ್ಥೆ ನಿರ್ಮಿಸಿ, ಜಿಲ್ಲೆಯ ಎಲ್ಲಾ ಹಿಂದುಳಿದ ಸಮುದಾಯಗಳ ಬಡ ಮಕ್ಕಳಿಗೆ ಶೈಕ್ಷಣಿಕ ನೆರವು ದೊರಕುವಂತೆ ಮಾಡಿ ಎಂದು ಕರೆ ನೀಡಿದರು.

ಚಾಮರಾಜನಗರ ಜಿಲ್ಲೆ ಅತ್ಯಂತ ಹಿಂದುಳಿದಿರುವ ಜಿಲ್ಲೆ. ಇಲ್ಲಿ ಶಿಕ್ಷಣ ಹೆಚ್ಚೆಚ್ಚು ಸಿಗಬೇಕಿದೆ. ಶಿಕ್ಷಣ ಕಲಿಯಬೇಕಿದ್ದರೆ ಹಾಸ್ಟೆಲ್‌ಗಳ ಅಗತ್ಯವೂ ಇದೆ. ನಮ್ಮ ಸರ್ಕಾರ ಎಲ್ಲಾ ಜಾತಿಯ ಬಡವರಿಗೂ ಅನುಕೂಲ ಆಗುವ ಯೋಜನೆಗಳನ್ನು ಜಾರಿಗೆ ತಂದಿದೆ. ಶಕ್ತಿ ಯೋಜನೆ ಸೇರಿ ನಮ್ಮ ಐದೂ ಗ್ಯಾರಂಟಿಗಳು ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡ ಮಹಿಳೆಯರಿಗೂ ಅನುಕೂಲ ಆಗುತ್ತಿದೆ. ಕೆಲಸಕ್ಕೆ ಹೋಗುವ ಬಡ ಮತ್ತು ಮಧ್ಯಮ ವರ್ಗದ ಹೆಣ್ಣು ಮಕ್ಕಳಿಗೆ ಇದರಿಂದ ಹೆಚ್ಚು ಸಮಾಧಾನ ಆಗಿದೆ. ವಿದ್ಯಾರ್ಥಿನಿಯರಿಗೂ ಸಮಾಧಾನ ಆಗಿದೆ. ಹೀಗೆ ಎಲ್ಲಾ ಜಾತಿಯ ಬಡವರು, ಮಧ್ಯಮ ವರ್ಗದವರಿಗೆ ನೆರವಾಗುವ ಕೆಲಸ ಮಾಡಿ ಎಂದು ಸಲಹೆ ನೀಡಿದರು.

ಸಂವಿಧಾನ ಬಂದು 75 ವರ್ಷ ಆದರೂ ಸಾಮಾಜಿಕ ನ್ಯಾಯ ಈಡೇರಿಲ್ಲ. ಅವಕಾಶ ವಂಚಿತ ಸಮುದಾಯಗಳ ಆರ್ಥಿಕ, ಸಾಮಾಜಿಕ ಸ್ಥಿತಿ ಗತಿ ಅರಿಯಲು ಸಮೀಕ್ಷೆ ನಡೆಸಿದ್ದೇವೆ. 2015 ರಲ್ಲಿ ನಡೆಸಿದ ಸಮೀಕ್ಷೆ ಬಳಿಕ ಬಂದ ಸಿಎಂ ಗಳು ಸ್ವೀಕರಿಸಿಲ್ಲ. ನಾನು ಸ್ವೀಕರಿಸಿ ಕ್ಯಾಬಿನೆಟ್ ಮುಂದೆ ಇಟ್ಟಿದ್ದೀನಿ. ಇದು ಯಾರ ವಿರುದ್ಧವೂ ಇರುವ ಸಮೀಕ್ಷೆ ಅಲ್ಲ. ಎಲ್ಲರ ಸ್ಥಿತಿ ಗತಿ ತಿಳಿಯುವ ಸಮೀಕ್ಷೆ ಮಾತ್ರ ಆಗಿದೆ ಎಂದರು.

ಬಿಜೆಪಿಯ ರಾಮಾ ಜೋಯಿಸ್ ಅವರು ಮೀಸಲಾತಿ ವಿರೋಧಿಸಿ ಕೋರ್ಟ್‌ಗೆ ಹೋಗಿದ್ದರು. ನಿಮಗೆ ಸೈದ್ಧಾಂತಿಕವಾಗಿ ಸ್ಪಷ್ಟ ತಿಳಿವಳಿಕೆ ಇರಬೇಕು ಎಂದು ತಿಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನೀವು ನನಗೂ ಚಪ್ಪಾಳೆ ತಟ್ಟೋದು, ಸಾಮಾಜಿಕ ನ್ಯಾಯದ ವಿರೋಧಿ ಆಗಿರುವ ಬಿಜೆಪಿಯವರ ಮಾತಿಗೂ ಚಪ್ಪಾಳೆ ತಟ್ಟೋದನ್ನು ನಿಲ್ಲಿಸಿ. ನಮ್ಮ ಪರವಾಗಿ ಇರುವವರು ಯಾರು ಎಂದು ತಿಳಿದು ಆಶೀರ್ವಾದ ಮಾಡಿ ಎಂದರು.

You Might Also Like

ದರ್ಶನ್ ಅರೆಸ್ಟ್ ಬಗ್ಗೆ ಮಾತನಾಡಲು ಇಚ್ಚಿಸದ ನಟ ಪ್ರಕಾಶ್ ರೈ

ಬೆಂಗಳೂರಿಗರೇ ಇಲ್ಲಿ ಗಮನಿಸಿ, ಒಂದು ತಿಂಗಳು‌ ಕ್ಲೋಸ್ ಆಗಿರಲಿವೆ ಈ ರಸ್ತೆಗಳು

ದ್ವೇಷ ಭಾಷಣ ನಿಷೇಧ ಕಾಯ್ದೆ ವಿರುದ್ಧ ಕೋರ್ಟ್‌ ಮೆಟ್ಟಿಲೇರಲು ಮುಂದಾದ ಪ್ರಮೋದ್ ಮುತಾಲಿಕ್

ಶಿವಮೊಗ್ಗ: ನೀರಾನೆ ದಾಳಿಗೆ ಪಶುವೈದ್ಯೆ ಬಲಿ, ತನಿಖೆಗೆ ಆದೇಶ

ಭೀಕರ ಅಪಘಾತ : ಗರ್ಭಿಣಿ ಮೇಲೆ ಹರಿದ ಲಾರಿ, ಹೊಟ್ಟೆಯಿಂದ ಹೊರಬಂದು ಒದ್ದಾಡಿ ಸಾವನ್ನಪ್ಪಿದ ಶಿಶು

TAGGED:#chamarajanagarSiddaramaiah
Share This Article
Facebook Copy Link Print
Previous Article K. Kasturirangan K. Kasturirangan K. Kasturirangan ಇಸ್ರೋದ ಮಾಜಿ ಅಧ್ಯಕ್ಷ ಕೆ.ಕಸ್ತೂರಿ ರಂಗನ್ ನಿಧನ
Next Article Amit Shah Amit Shah Amit Shah ಪೆಹಲ್ಗಾಮ್ ಪ್ರತೀಕಾರ : ಭಾರತದಲ್ಲಿರುವ ಪಾಕ್ ಪ್ರಜೆಗಳನ್ನು ಓಡಿಸುವಂತೆ ಅಮಿತ್‌ ಶಾ ನಿರ್ದೇಶನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up