ಬೆಳಗಾವಿ : ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಗಂಡನನ್ನು ಪತ್ನಿ ಕಲ್ಲು ಎತ್ತಿ ಹಾಕಿ ಕೊಂದು ತುಂಡು ತುಂಡಾಗಿ ಕತ್ತರಿಸಿದ ಘಟನೆ ಬೆಳಗಾವಿಯ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದಲ್ಲಿ ಘಟನೆ.
ಪತ್ನಿ ಸರಸಕ್ಕೆ ಬರದಿದ್ದಾಗ ಮಗಳ ಮೇಲೆ ಎರಗಲೇತ್ನಿಸಿದ ಪಾಪಿಯ ಹತ್ಯೆ.ಮಕ್ಕಳು ಮಲಗಿದ ಮೇಲೆ ಕಲ್ಲು ಎತ್ತಿ ಹಾಕಿ ಗಂಡನ ಕೊಂದ ಹೆಂಡತಿ. ಉಮರಾಣಿ ಗ್ರಾಮದ ಪತ್ನಿ ಸಾವಿತ್ರಿ ಇಟ್ನಾಳೆ(30) ಯಿಂದ ಗಂಡ ಶ್ರೀಮಂತ ಇಟ್ನಾಳೆ ಹತ್ಯೆಯಾಗಿದೆ. ಗಂಡನ ಕೊಂದ ಬಳಿಕ ಮಕ್ಕಳು ಅನಾಥರಾಗ್ತಾರೆ ಎಂದು ಸಿನಿಮೀಯ ರೀತಿಯಲ್ಲಿ ಪತಿಯ ದೇಹವನ್ನು ತುಂಡರಿಸಿ ಸಾಗಾಟ ಮಾಡಿದ್ದಳು. ಮನೆಯಲ್ಲಿ ಬಿದ್ದ ರಕ್ತದ ಕಲೆಗಳನ್ನು ಶುಚಿಗೊಳಿಸಿದ್ದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ ಎಂದರು.
ಈ ಘಟನೆ ಕುರಿತಂತೆ ಆರೋಪಿ ಪತ್ನಿಯನ್ನು ಬಂಧಿಸಲಾಗಿದೆ ಎಂದು ಎಸ್ಪಿ ಡಾ.ಭೀಮಾಶಂಕರ ಗುಳೇದ ಹೇಳಿದರು. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಡಿ.10 ಶ್ರೀಮಂತ ಇಟ್ನಾಳ್ ನನ್ನು ಆತನ ಪತ್ನಿ ಸಾವಿತ್ರಿ ಕೊಲೆ ಮಾಡಿದ್ದಾಳೆ. ಕೊಲೆ ಮಾಡಿ ಪತಿಯ ಶವವನ್ನು ಎರಡು ತುಂಡು ಮಾಡಿ ದೇಹವನ್ನು ಸಾಗಿಸಿದ್ದಳು.
ಒಬ್ಬಳಿಗೆ ಶವ ಸಾಗಿಸಲು ಆಗಲ್ಲ ಅಂತಾ ಗಂಡನ ದೇಹವನ್ನೇ ತುಂಡರಿಸಿದ ಪತ್ನಿ ದೇಹವನ್ನ ಎರಡು ಭಾಗ ತುಂಡರಿಸಿ ಚಿಕ್ಕ ಬ್ಯಾರೆಲ್ ನಲ್ಲಿ ಹಾಕಿ ಸಾಗಾಟ. ಬ್ಯಾರೆಲ್ ಉರುಳಿಸುತ್ತಾ ಶವ ಒಯ್ದು ಪಕ್ಕದ ಗದ್ದೆಗೆ ಹಾಕಿದ್ದ ಪತ್ನಿ. ಕಟ್ ಮಾಡಿದ್ದ ದೇಹವನ್ನ ಮತ್ತೆ ಜೋಡಿಸಿದ ರೀತಿಯಲ್ಲಿ ಹಾಕಿದ್ದ ಸಾವಿತ್ರಿ.
ಕೃತ್ಯಕ್ಕೆ ಬಳಸಿದ್ದ ಬ್ಯಾರೆಲ್ ತೊಳೆದು ಬಾವಿಗೆ ಎಸೆದಿದ್ದಳು. ಮತ್ತೆ ಮನೆಗೆ ಬಂದು ಕೃತ್ಯಕ್ಕೆ ಬಳಸಿದ್ದ ಮಾರಕಾಸ್ತ್ರ, ರಕ್ತಸಿಕ್ತವಾದ ಹಾಸಿಗೆ, ಬಟ್ಟೆ ಒಂದು ಚೀಲದಲ್ಲಿ ಪ್ಯಾಕ್. ಆ ಚೀಲವನ್ನ ಬಾವಿಗೆ ತೆಗೆದುಕೊಂಡು ಹೋಗಿ ಮೇಲೆ ಬರದಂತೆ ಕಲ್ಲು ಕಟ್ಟಿ ಎಸೆದು ವಾಪಸ್.
ರಕ್ತ ಬಿದ್ದ ಜಾಗವನ್ನು ಸ್ವಚ್ಛಗೊಳಿಸಿ ಸ್ನಾನ ಮಾಡಿ ಬಳಿಕ ತನ್ನ ಮೈಮೇಲಿದ್ದ ಬಟ್ಟೆ ಸುಟ್ಟು ಹಾಕಿ. ಸುಟ್ಟಿದ್ದ ಬೂದಿಯನ್ನ ತಿಪ್ಪೆಗೆ ಎಸೆದಿದ್ದ ಪತ್ನಿ ಸಾವಿತ್ರಿ. ಕೊಲೆಗೆ ಬಳಸಿದ್ದ ಕಲ್ಲು ತೊಳೆದು ತಗಡಿನ ಶೆಡ್ ನಲ್ಲಿ ಬಚ್ಚಿಟ್ಟಿದ್ದಳು. ಗಂಡನ ಮೊಬೈಲ್ ಕೂಡ ಸ್ವಿಚ್ ಆಫ್ ಮಾಡಿ ಮನೆಯಲ್ಲಿಟ್ಟಿದ್ದಳು.
ಈ ವೇಳೆ ಎಚ್ಚರಗೊಂಡ ಮೊದಲ ಮಗಳಿಗೆ ಎಲ್ಲಿಯೂ ಹೇಳದಂತೆ ತಾಕೀತು ಮಾಡಿದ್ದ ತಾಯಿ. ಬೆಳಗಾಗುವಷ್ಟರಲ್ಲಿ ಕೊಲೆಯ ಸುಳಿವೇ ಸಿಗದಂತೆ ಮಾಡಿದ್ದ ಪತ್ನಿ. ಜಮೀನಿನಲ್ಲಿ ಶವ ಸಿಗ್ತಿದ್ದಂತೆ ಕೊಲೆ ಕೇಸ್ ದಾಖಲಿಸಿಕೊಂಡು ತನಿಖೆ.
ಚಿಕ್ಕೋಡಿ ಪೊಲೀಸರ ತನಿಖೆ ವೇಳೆ ಹೆಂಡತಿ ಮೇಲೆ ಅನುಮಾನ. ತಮ್ಮದೇ ಭಾಷೆಯಲ್ಲಿ ವಿಚಾರಿಸಿದಾಗ ತನ್ನಿಂದ ತಪ್ಪಾಗಿದೆ ಕ್ಷಮಿಸಿ ಅಂತಾ ಕಣ್ಣೀರು. ಕುಡಿಯಲು ಹಣ ಕೊಡಬೇಕು, ಬೈಕ್ ಕೊಡಿಸುವಂತೆ ಕಿರುಕುಳ. ಯಾರ ಜೊತೆಗೆ ಆದ್ರೂ ಮಲಗು ಹಣ ಕೊಡು ಅಂತಾ ಪೀಡಿಸುತ್ತಿದ್ದ ಗಂಡ.
15 ವರ್ಷದ ಹಿಂದೆ ಮದುವೆಯಾಗಿದ್ದ ಸಾವಿತ್ರಿ ಮತ್ತು ಶ್ರೀಮಂತ. ಇದೇ ಕಾರಣಕ್ಕೆ ಪರ ಪುರುಷರ ಜೊತೆಗೆ ಸಂಬಂಧ ಇಟ್ಟುಕೊಂಡಿದ್ದಾಗಿ ಒಪ್ಪಿಗೆ. ಮಗಳ ಮೇಲೆ ಎರಗಲೇತ್ನಿಸಿದ್ದನ್ನ ನೋಡಿ ಸಹಿಸಿಕೊಳ್ಳದೇ ಕೊಲೆ ಮಾಡಿದ್ದಾಗಿ ಪತ್ನಿ ಒಪ್ಪಿಗೆ. ಮಕ್ಕಳು ಅನಾಥವಾಗ್ತವೆ ಬಿಟ್ಟು ಬಿಡಿ ಎಂದು ಆರೋಪಿ ಕಣ್ಣೀರು. ಆರೋಪಿ ಸಾವಿತ್ರಿ ಇಟ್ನಾಳೆ ಬಂಧಿಸಿ ಜೈಲಿಗಟ್ಟಿದ ಚಿಕ್ಕೋಡಿ ಠಾಣೆ ಪೊಲೀಸರು.

