ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು (Bengaluru) ಸೇರಿದಂತೆ ಹಲವು ಭಾಗಗಳಲ್ಲಿ ಕಳೆದ ಒಂದು ವಾರದಿಂದ ಮಳೆಯಾಗುತ್ತಿದ್ದು (Rಅಇನಿನಗ), ಮಂದಿನ ಐದು ದಿನಗಳೂ ಮಳೆಯಾಗುವ ಸಾಧ್ಯತೆ ಇದೆ.
ಇಂದಿನಿಂದ ಮುಂದಿನ ಐದು ದಿನಗಳ ಕಾಲ ರಾಜ್ಯದ ಹಲವೆಡೆ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಸಿಲಾಗಿದೆ. ಇದನ್ನೂ ಓದಿ: ಭಾವಾನಿ ರೇವಣ್ಣ ವಿರುದ್ಧ ಎಚ್ಚರಿಕೆಯ ಹೆಜ್ಜೆ ಇಡುವಂತೆ ಎಸ್‌ಐಟಿಗೆ ಸೂಚನೆ

ರಾಜ್ಯದಲ್ಲಿ ಮಳೆ ಹೆಚ್ಚಾಗುವ ಕಾರಣ ಹಲವು ಜೆಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದು ಮುಂಜಾನೆಯಿಂದ ಮೋಡ ಕವಿದಿದ್ದು, ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ತಂಪಾದ ವಾತಾವರಣವಿದೆ. ಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪತ್ನಿಗೆ ಹೆದರಿಸಲು ಹೋಗಿ ಜಿಮ್ ಟ್ರೈನರ್ ಸಾವು
ನಗರದಲ್ಲಿಯೂ ಸಹ ಮುಂದಿನ 5 ದಿನಗಳ ಕಾಲ ಮಳೆಯಾಗಲಿದೆ. ಮಳೆ ಜೊತೆಗೆ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ, ಗುಡುಗು ಮಿಂಚು ಇರಲಿದೆ. ಸರ‍್ವಜನಿಕರು ಗಾಳಿ ಮಳೆಯ ವೇಳೆ ಮರದ ಕೆಳಗೆ, ಇನ್ನಿತರೆ ಅಸುರಕ್ಷಿತ ಜಾಗಗಳಲ್ಲಿ ಇರದಂತೆ ಇಲಾಖೆ ಎಚ್ಚರಿಸಿದೆ.ಇದನ್ನೂ ಓದಿ: ಹಸುಗೂಸನ್ನು ರಸ್ತೆ ಬದಿಗೆ ಎಸೆದ ಅನಾಮಿಕರು

