ಬೆಂಗಳೂರು, ಜ.6: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶುಭಾಶಯ ಕೋರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಿಕೆಶಿ, “ನಮಗೆ ಯಾವುದೇ ಗೊಂದಲ ಇಲ್ಲ. ಸಿದ್ದರಾಮಯ್ಯ ಅವರಿಗೆ ಶುಭ ಹಾರೈಸುತ್ತೇನೆ. ಅವರು ಇನ್ನೂ ದೀರ್ಘಾವಧಿ ಮುಖ್ಯಮಂತ್ರಿ ಆಗಿ ಕಾರ್ಯನಿರ್ವಹಿಸಿ ಹೊಸ ರೆಕಾರ್ಡ್‌ಗಳನ್ನು ಸೃಷ್ಟಿಸಲಿ” ಎಂದು ಹೇಳಿದರು.
ಮುಂದುವರೆದು, “I wish him all the best. ಸಿದ್ದರಾಮಯ್ಯ ಅವರಿಗೆ ಒಳ್ಳೆಯದಾಗಲಿ ಎಂಬುದೇ ನನ್ನ ಹಾರೈಕೆ. ಪಕ್ಷದಲ್ಲೂ ಸರ್ಕಾರದಲ್ಲೂ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ” ಎಂದು ಸ್ಪಷ್ಟಪಡಿಸಿದರು.
ಸಿದ್ದರಾಮಯ್ಯ ಅವರು ಈಗಾಗಲೇ ದೀರ್ಘಾವಧಿ ಮುಖ್ಯಮಂತ್ರಿ ಆಗಿ ಕಾರ್ಯನಿರ್ವಹಿಸಿ ದಾಖಲೆಯನ್ನು ನಿರ್ಮಿಸಿರುವುದನ್ನು ಉಲ್ಲೇಖಿಸಿದ ಡಿ.ಕೆ.ಶಿವಕುಮಾರ್, ಅವರ ನಾಯಕತ್ವದ ಮೇಲೆ ಸಂಪೂರ್ಣ ವಿಶ್ವಾಸವಿದೆ ಎಂದು ಹೇಳಿದರು.
ಈ ಹೇಳಿಕೆಯೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಶುಭಾಶಯಗಳು ರಾಜಕೀಯ ವಲಯದಲ್ಲಿ ಗಮನ ಸೆಳೆದಿವೆ.

