ತುರುವೇಕೆರೆ, ಜನವರಿ 8: ತುರುವೇಕೆರೆ ತಾಲೂಕಿನ ದಂಡಿನ ಶಿವರ ಹೋಬಳಿ ವ್ಯಾಪ್ತಿಯ ರಾಯಸಂದ್ರ ಗ್ರಾಮದ ಸರ್ವೆ ನಂಬರ್ 75ರಲ್ಲಿ ವಾಮಾಚಾರಕ್ಕೆ ಹಂದಿಯನ್ನು ಬಲಿ ನೀಡಿರುವ ಘಟನೆ ಬೆಳಕಿಗೆ ಬಂದಿದೆ.
ಕಳೆದ ಶನಿವಾರ ಪೂರ್ಣಿಮೆಯ ದಿನವಾಗಿದ್ದ ಕಾರಣ, ಅದೇ ರಾತ್ರಿ ಯಾರೋ ಅಪರಿಚಿತರು ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಗ್ರಾಮದ ಹೊರವಲಯದಲ್ಲಿರುವ ಜಮೀನಿನಲ್ಲಿ ಹಂದಿಯನ್ನು ಕೊಂದು ವಾಮಾಚಾರ ನಡೆಸಿರುವ ಗುರುತುಗಳು ಪತ್ತೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಹಾಗೂ ಆಕ್ರೋಶ ಮೂಡಿಸಿದೆ.
ಘಟನೆ ಕುರಿತು ಸ್ಥಳೀಯರು ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಆರೋಪಿಗಳನ್ನು ಪತ್ತೆ ಹಚ್ಚುವಂತೆ ಒತ್ತಾಯಿಸಿದ್ದಾರೆ. ಈ ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

