ಮೈಸೂರು: ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಯದುವೀರ್ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ (Yaduveer Krishnadatta Chamaraja Wadiyar) ಮೈಸೂರು (Mysuru) ಲೋಕಸಭಾ ಕ್ಷೇತ್ರದಲ್ಲಿ ಗೆದ್ದು ಬೀಗಿದ್ದಾರೆ. ಇದರಿಂದ ತವರಲ್ಲೇ ಸಿಎಂಗೆ ಮುಖಭಂಗವಾಗಿದೆ.
ಯದುವೀರ್ ಅವರು ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ (M.Laxman) ವಿರುದ್ಧ 1.30 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಮೈಸೂರು ರಾಜ ವಂಶಸ್ಥ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ನಂತರ ಯದುವೀರ್ ಪಾರ್ಲಿಮೆಂಟ್ ಪ್ರವೇಶಿಸಿದ್ದಾರೆ. ಇದನ್ನೂ ಓದಿ: ಕೋಲಾರದಲ್ಲಿ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬುಗೆ ಜಯದ ಮಾಲೆ
ಸಿಎಂ ತವರು ಜಿಲ್ಲೆಯಾದ ಮೈಸೂರು ಕ್ಷೇತ್ರ ಪ್ರತಿಷ್ಠೆಯ ಕಣವಾಗಿತ್ತು. ಮೊದಲ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರನ್ನೇ ಕಣಕ್ಕಿಳಿಸುವಂತೆ ಸಿಎಂ ಒತ್ತಾಯಿಸಿದ್ದರು. ಆದರೆ ಪುತ್ರ ಭವಿಷ್ಯದ ದೃಷ್ಟಿಯಿಂದ ಕಣಕ್ಕಿಳಿಸಲು ನಿರಾಕರಿಸಿದರು. ಒಕ್ಕಲಿಗ ಸಮುದಾಯದ ಲಕ್ಷ್ಣಣ್ ಅವರನ್ನೇ ಹುರಿಯಾಳಾಗಿಸಿದರು. ಆದರೆ ಮೈಸೂರು ಜನರು ಮಾತ್ರ ಮಹಾರಾಜರ ಕೈಹಿಡಿದಿದ್ದಾರೆ. ಇದನ್ನೂ ಓದಿ: ಉತ್ತರ ಕನ್ನಡದಲ್ಲಿ ಅಂಜಲಿ ನಿಂಬಾಳ್ಕರ್ ವಿರುದ್ಧ ಕಾಗೇರಿಗೆ ಗೆಲುವು
ಎರಡು ಬಾರಿ ಸಂಸದರಾಗಿ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಪ್ರತಾಪ್ ಸಿಂಹ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ನಿರಾಕರಿಸಿತ್ತು. ಬದಲಿಗೆ ರಾಜವಂಶಸ್ಥ ಯದುವೀರ್ ಅವರನ್ನು ಕಣಕ್ಕಿಳಿಸಿತ್ತು. ಬಿಜೆಪಿ ನಾಯಕರು ಉತ್ಸಾಹದಿಂದಲೇ ಯದುವೀರ್ ಪರ ಕ್ಷೇತ್ರದಾದ್ಯಂತ ಓಡಾಡಿ ಪ್ರಚಾರ ನಡೆಸಿದ್ದರು. ಇದನ್ನೂ ಓದಿ: ಕೋಲಾರದಲ್ಲಿ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬುಗೆ ಜಯದ ಮಾಲೆ

