By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮದುವೆಯಾಗುವುದಾಗಿ ನಂಬಿಸಿ ಮಹಿಳಾ ಕಾನ್ಸ್​ಟೇಬಲ್​ಗೆ 18 ಲಕ್ಷ ರೂ. ಪಂಗನಾಮ..!
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಮದುವೆಯಾಗುವುದಾಗಿ ನಂಬಿಸಿ ಮಹಿಳಾ ಕಾನ್ಸ್​ಟೇಬಲ್​ಗೆ 18 ಲಕ್ಷ ರೂ. ಪಂಗನಾಮ..!

ರಾಜ್ಯ-Karnataka

ಮದುವೆಯಾಗುವುದಾಗಿ ನಂಬಿಸಿ ಮಹಿಳಾ ಕಾನ್ಸ್​ಟೇಬಲ್​ಗೆ 18 ಲಕ್ಷ ರೂ. ಪಂಗನಾಮ..!

Woman constable cheated of Rs 18 lakh by promising marriage.

Published January 31, 2025
Share
2 Min Read
Matrimony Fraud
SHARE

ನೆಲಮಂಗಲ : ಮ್ಯಾಟ್ರಿಮೋನಿ ಸೈಟ್​ನಲ್ಲಿ ಪರಿಚಯವಾದ ವ್ಯಕ್ತಿ ಮದುವೆಯಾಗುವುದಾಗಿ ನೀಡಿದ ಮಾತನ್ನು ನಂಬಿ ವರದಕ್ಷಿಣೆ ಎಂದು 18 ಲಕ್ಷ ರೂ. ನೀಡಿ ಮಹಿಳಾ ಕಾನ್ಸ್​ಟೇಬಲ್ ಒಬ್ಬರು ವಂಚನೆಗೆ ಒಳಗಾದ ಘಟನೆ ನೆಲಮಂಗಲ ತಾಲೂಕಿನಿಂದ ವರದಿಯಾಗಿದೆ. ಇದೀಗ ದಾಬಸ್ ಪೇಟೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯ ಪತ್ತೆಗಾಗಿ ಬಲೆ ಬೀಸಿದ್ದಾರೆ.

ಇತ್ತೀಚೆಗೆ ಮ್ಯಾಟ್ರಿಮೋನಿ ತಾಣಗಳ ಮೂಲಕ ಮೋಸ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಕಾನ್ಸ್​ಟೇಬಲ್ ಮಹಿಳೆಯೊಬ್ಬರು ಮ್ಯಾಟ್ರಿಮೋನಿ ತಾಣದಲ್ಲಿ ಪರಿಚಯವಾದ ವ್ಯಕ್ತಿಯಿಂದ 18 ಲಕ್ಷ ರೂ. ವಂಚನೆಗೆ ಒಳಗಾಗಿದ್ದಾರೆ.

ಸಂತ್ರಸ್ತೆಯು ಅವರು ಕನ್ನಡ ಮ್ಯಾಟ್ರಿಮೋನಿ ಮತ್ತು ಯಾದವ ಮ್ಯಾಟ್ರಿಮೋನಿ ತಾಣಗಳಲ್ಲಿ ಜೀವನ ಸಂಗಾತಿಯನ್ನು ಹುಡುಕುತ್ತಿರುವಾಗ ಅಶೋಕ್ ಮುಸ್ತಿ ಎಂಬಾತ ಪರಿಚಯವಾಗಿದ್ದಾನೆ. ತೆಲಂಗಾಣ ಮೂಲದವನಾದ ಆತ, ಸರ್ಕಾರಿ ಉದ್ಯೋಗಕ್ಕಾಗಿ ತಯಾರಿ ಮಾಡುತ್ತಿದ್ದೇನೆ ಎಂದು ನಂಬಿಸಿ, ಮದುವೆ ಮಾತುಕತೆ ಮುಗಿಸಿ ವಂಚನೆ ಎಸಗಿದ್ದಾನೆ.

ಮದುವೆಯಾಗುವ ನೆಪದಲ್ಲಿ ಆಗಾಗ ಮನೆಗೂ ಬರುತ್ತಿದ್ದ ಆರೋಪಿ, ಮದುವೆಗಾಗಿ ವರದಕ್ಷಿಣೆ ಹಣವಾಗಿ 20 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದ. ಮೋಸದ ಜಾಲದ ಅರಿವಾಗದ ಸಂತ್ರಸ್ತೆ ಯುವಕ ಹೇಳಿದ ಬ್ಯಾಂಕ್ ಖಾತೆಗೆ 18 ಲಕ್ಷ ರೂಪಾಯಿ ವರ್ಗಾವಣೆ ಮಾಡಿದ್ದಾರೆ.

ಆದರೆ ಆ ನಂತರ ಆತ ಒಂದಲ್ಲ ಒಂದು ರೀತಿಯಲ್ಲಿ ತಡಮಾಡಿ, ನಂತರ ಮದುವೆ ನಿರಾಕರಿಸಿದ್ದ. ಈ ಬಗ್ಗೆ ಸಂತ್ರಸ್ತೆ ಅಳಲುತೋಡಿಕೊಂಡಿದ್ದು, ನನ್ನ ಹಣವನ್ನೂ ವಾಪಸ್ ಕೊಡದೇ, ಮೊಬೈಲ್ ಕರೆ ಸ್ವೀಕರಿಸದೆ ನನ್ನನ್ನು ಮೋಸ ಮಾಡಿದ್ದಾನೆಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಪೊಲೀಸರಿಗೆ ದೂರು ನೀಡಿದ್ದಾರೆ.

ತೆಲಂಗಾಣದ ಅಶೋಕ್ ಮುಸ್ತಿ ಮತ್ತು ಆತನ ಕುಟುಂಬದವರ ವಿರುದ್ಧ ಪೊಲೀಸರಿಗೆ ಸಂತ್ರಸ್ತೆ ದೂರು ನೀಡಿದ್ದಾರೆ. ಅಶೋಕ್ ಹಾಗೂ ಆತನ ಸಂಬಂಧಿಕರು 18 ಲಕ್ಷ ರೂ. ಪಡೆದಿದ್ದು, ಇದೀಗ ಒಬ್ಬರಾಗಿ ಈಕೆಯ ಜೋತೆ ಸಂಪರ್ಕ ಕಡಿದುಕೊಂಡಿದ್ದಾರೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ದಾಬಸ್ ಪೇಟೆ ಪೊಲೀಸರು ಸಂತ್ರಸ್ತೆಯ ದೂರಿನಂತೆ ಐಪಿಸಿ ಸೆಕ್ಷನ್ 318, 321, 190 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳು ಪತ್ತೆಗೆ ಕ್ರಮ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.

ಈ ಪ್ರಕರಣ ಮ್ಯಾಟ್ರಿಮೋನಿ ಜಾಲ ತಾಣಗಳ ಮೂಲಕ ನಡೆಯುವ ವಂಚನೆಗಳಿಗೆ ಎಚ್ಚರಿಕೆಯ ಸಂದೇಶವಾಗಿದೆ. ಇಂತಹ ಮೋಸಗಳು ಆಗಾಗ್ಗೆ ನಡೆದು ಅಮಾಯಕ ಯುವಕ ಯುವತಿಯರು ಒಂದಲ್ಲ ರೀತಿಯಲ್ಲಿ ಬಲಿಯಾಗುತ್ತಿದ್ದಾರೆ. ಮ್ಯಾಟ್ರಿಮೋನಿ ತಾಣಗಳಲ್ಲಿ ಪರಿಚಯವಾಗುವವರ ಜತೆ ಗೆಳೆತನ, ಹಣಕಾಸು ವ್ಯವಹಾರಗಳನ್ನು ನಡೆಸುವ ಮುನ್ನ ಹೆಚ್ಚಿನ ಪರಿಶೀಲನೆ, ಎಚ್ಚರಿಕೆ ಅಗತ್ಯ.

You Might Also Like

ಬೆಳಗಾವಿ ನಗರದಲ್ಲಿ ಗೋಮಾಂಸ ಸಾಗಾಟ ಮಾಡುತ್ತಿದ್ದವರನ್ನು ಹಿಡಿದ ಹಿಂದೂಪರ ಸಂಘಟನೆಯ ಕಾರ್ಯಕರ್ತರು

ಬೆಂಗಳೂರಿನ ಲಾಲ್ ಬಾಗ್ ನಲ್ಲಿ ಹೊಸ ರೂಲ್ಸ್ ಜಾರಿ

ಪ್ರಜ್ವಲ್‌ ಪೆನ್‌ಡ್ರೈವ್‌ ಕೇಸ್‌; ಕೇಳಿದಂತೆ ಸಮಯ ಕೊಡಲು ಆಗುವುದಿಲ್ಲ: ಜಿ ಪರಮೇಶ್ವರ್‌

ಬೆಂಗಳೂರಲ್ಲಿ ಪಿಒಪಿ ಗಣೇಶ ಮೂರ್ತಿಗಳ ದರ್ಬಾರ್, ಮೂಕ ಪ್ರೇಕ್ಷಕರಾದ ಅಧಿಕಾರಿಗಳು

ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

TAGGED:Woman Constable
Share This Article
Facebook Copy Link Print
Previous Article KWJV locks up Shivamogga Press Trust Press House KWJV ವತಿಯಿಂದ ಶಿವಮೊಗ್ಗ ಪ್ರೆಸ್ ಟ್ರಸ್ಟ್ ಪತ್ರಿಕಾಭವನಕ್ಕೆ ಬೀಗ ಹಾಕಿ – ಡಿಸಿಗೆ ಬೀಗದ ಕೀ ಕೊಡುವ ಚಳುವಳಿ!!
Next Article PM Modi ಐತಿಹಾಸಿಕ ಮಸೂದೆಗಳು ಸದನದಲ್ಲಿ ಚರ್ಚೆಯಾಗಲಿವೆ : ಬಜೆಟ್ ಅಧಿವೇಶನಕ್ಕೂ ಮುನ್ನ ಮೋದಿ ಮಾತು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up