ಬೆಂಗಳೂರು ನಗರ ಜಿಲ್ಲೆ : ಜಿಲ್ಲಾ ಪ್ರವಾಸದಲ್ಲಿರುವ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮೀ ಚೌಧರಿ ಅವರು ಇಂದು ಮೈಸೂರು ರಸ್ತೆ ಕಂಬಿಪುರದಲ್ಲಿರುವ ಎಸಿಎಸ್ ಇಂಜಿನಿಯರಿಂಗ್ ಕಾಲೇಜ್‌ಗೆ ಭೇಟಿ ನೀಡಿ ವಿದ್ಯಾರ್ಥಿನಿಯರು ಹಾಗೂ ಮಹಿಳಾ ಬೋಧಕರೊಂದಿಗೆ ಸಂವಾದ ನಡೆಸಿದರು.
ಇದೇ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿಯಾದ ಆರತಿ ಬಿ.ವಿ, ಮಾಗಡಿಯ ಡಿವೈಎಸ್ಪಿ ಪ್ರವೀಣ್, ಕುಂಬಳಗೂಡು ಸರ್ಕಲ್ ಇನ್ಸ್ಪೆಕ್ಟರ್ ಮಂಜುನಾಥ್ ಹೂಗಾರ್, ಎ ಸಿ ಎಸ್ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಆನಂದತೀರ್ಥ ಬಿ ಗುಡಿ ಹಾಗೂ ಎ ಸಿ ಎಸ್ ಎಂಜಿನಿಯರಿಂಗ್ ಕಾಲೇಜಿನ ಮಹಿಳಾ ಬೋಧಕರು ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

