ಬೆಂಗಳೂರು : ಈ ಬಾರಿ ಸಾಹಿತಿ ಹಂ.ಪ ನಾಗರಾಜಯ್ಯ ಅವರು ದಸರಾ ಉದ್ಘಾಟನೆ ಮಾಡಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ 2024ನೇ ಸಾಲಿನ ಮೈಸೂರು ದಸರಾ ಉದ್ಘಾಟಕರಹೆಸರು ಇದೀಗ ಘೋಷಣೆಯಾಗಿದೆ.
ಮೈಸೂರಿನ ಮಂಡಕಳ್ಳಿ ಏರ್ ಪೋರ್ಟ್ ನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅ.3 ರಂದು ದಸರಾ ಉದ್ಘಾಟನೆಯಾಗಲಿದೆ. ಈ ಬಾರಿ ಸಾಹಿತಿ ಹಂ.ಪ ನಾಗರಾಜಯ್ಯ ಅವರು ದಸರಾ ಉದ್ಘಾಟನೆ ಮಾಡಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಹಂ.ಪ.ನಾಗರಾಜಯ್ಯನವರು ಕನ್ನಡ ಸಾರಸ್ವತ ಲೋಕದಲ್ಲಿ ‘ಹಂಪನಾ’ ಎಂದೇ ಚಿರಪರಿಚಿತರು. ಇವರು ಇಂದಿನ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಹಂಪಸಂದ್ರ ಎಂಬ ಗ್ರಾಮದಲ್ಲಿ ಅಕ್ಟೋಬರ್ 7, 1936ರಲ್ಲಿ ಜನಿಸಿದರು. ಇವರ ತಂದೆ ಶಾನುಬೋಗ ಪದ್ಮನಾಭಯ್ಯ ಮತ್ತು ತಾಯಿ ಪದ್ಮಾವತಮ್ಮನವರು.ಹಂಪನಾ ಅವರಿಗೆಕನ್ನಡ ವಿಶ್ವವಿದ್ಯಾಲಯವು 2006ರಲ್ಲಿ ನಾಡೋಜ ಪ್ರಶಸ್ತಿ ನೀಡಿ ಗೌರವಿಸಿದೆ.
ಅಲ್ಲದೆ ಅವರನ್ನು ಹಲವಾರು ಪ್ರಶಸ್ತಿಗಳು ಹುಡುಕಿಕೊಂಡು ಬಂದಿವೆ. ನಾಡಿನ ಪರಮೋಚ್ಛ ಸಾಹಿತ್ಯ ದೇಗುಲವಾದ ಕನ್ನಡ ಸಾಹಿತ್ಯ ಪರಿಷತ್ತಿಗೆ 1978ರಿಂದ 1986ರ ದೀರ್ಘ ಅವಧಿಗೆ ಇವರು ಅಧ್ಯಕ್ಷರಾಗಿದ್ದರು. ಅದಕ್ಕೂ ಮುನ್ನ 1966ರಿಂದ 1974ರ ಅವಧಿಯಲ್ಲಿ ಕಾರ್ಯದರ್ಶಿಯಾಗಿಯೂ ದುಡಿದಿದ್ದರು. ತಮ್ಮ ಅಧ್ಯಕ್ಷತೆ ಅವಧಿಯಲ್ಲಿ ಕನ್ನಡದ ಎಲ್ಲ ಕ್ಷೇತ್ರಗಳಿಗೆ ಸಂಬಂಧಿಸಿದ ವಿವಿಧ ಲೇಖಕರ ಸುಮಾರು ಮುನ್ನೂರು ಮೌಲಿಕ ಪುಸ್ತಕಗಳನ್ನು ಪ್ರಕಟಿಸಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಆವರಣದಲ್ಲಿ ಪರಿಷತ್ತಿನ ಚಿನ್ನದಹಬ್ಬದ ನೆನಪಿಗಾಗಿ ಭವ್ಯ ಕಟ್ಟಡವನ್ನು ಕಟ್ಟಿಸಿದರು.

