ಯಾದಗಿರಿ: ನಿನ್ನೆ ಬೀಳ್ಕೊಡುಗೆ ಪಡೆದ ಯಾದಗಿರಿ ಪಿಎಸ್‌ಐ ಪರಶುರಾಮ್ ಇಂದು ಬಿಗೂಢವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೊನ್ನೆಯಷ್ಟೇ ನಗರ ಠಾಣೆಯಲ್ಲಿ ಅಭಿಮಾನದ ಬೀಳ್ಕೊಡುಗೆ ಪಡೆದಿದ್ದರು. ನಿನ್ನೆ ಪೊಲೀಸ್ ಕ್ವಾರ್ಟರ್ಸ್ ನಿವಾಸದಲ್ಲಿ ಹಠಾತ್ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ.
ಯಾದಗಿರಿ ನಗರ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಶುರಾಮ್ ಸಾವನ್ನಪ್ಪಿದ PSI. ಪರಶುರಾಮ್ ಇತ್ತೀಚೆಗೆ ಸೈಬರ್ ಕ್ರೈಮ್ ಪಿಎಸ್ಐ ಆಗಿ ವರ್ಗಾವಣೆಗೊಂಡಿದ್ದರು.
ಪೋಸ್ಟಿಂಗ್‌ಗಾಗಿ ಲಕ್ಷ ಲಕ್ಷ ಹಣಕ್ಕೆ ಯಾದಗಿರಿ ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಬೇಡಿಕೆ ಇಟ್ಟಿದ್ದರು. ಈಗ ನಿಯಮಬಾಹಿರವಾಗಿ ಅವರನ್ನು ವರ್ಗಾವಣೆ ಮಾಡಿದ್ದರಿಂದ ಅವರು ತೀವ್ರ ಒತ್ತಡಕ್ಕೆ ಒಳಗಾಗಿದ್ದರು. ಭಾರೀ ಒತ್ತಡದಿಂದ ಅವರಿಗೆ ಹೃದಯಾಘಾತವಾಗಿದೆ. ಯಾದಗಿರಿ ಶಾಸಕರಿಗೆ ಹಣದ ಆಸೆ ಬಹಳಷ್ಟಿದೆ. ಪರಶುರಾಮ್ ಅವರ ಜಾಗಕ್ಕೆ ಬೇರೊಬ್ಬರು ಬಂದರೂ ವರ್ಗಾವಣೆ ಪಟ್ಟಿಯಲ್ಲಿ ಪರಶುರಾಮ್ ಹೆಸರೇ ಇರಲಿಲ್ಲ. ಈಗ ಹೊಸದಾಗಿ ಬಂದವರು ಹಣ ನೀಡಿಯೇ ಬಂದಿದ್ದಾರೆ ಎಂದು ಮಾವ ವೆಂಕಟಸ್ವಾಮಿ ಮತ್ತು ಪತ್ನಿ ಶ್ವೇತಾ ಗಂಭೀರ ಆರೋಪ ಮಾಡಿದ್ದಾರೆ.
ಪಿಎಸ್ಐ ಪರಶುರಾಮ್ ಮೃತಪಟ್ಟ ಹಿನ್ನೆಲೆಯಲ್ಲಿ ಯಾದಗಿರಿಯ ದಲಿತ ಸಂಘಟನೆಗಳು ರಾತ್ರಿಯೇ ಪ್ರತಿಭಟನೆ ನಡೆಸಿವೆ. ನಗರದ ಖಾಸಗಿ ಆಸ್ಪತ್ರೆ ಬಳಿ ಜಮಾಯಿಸಿದ ವಿವಿಧ ಸಂಘಟನೆಯ ಕಾರ್ಯಕರ್ತರು ಅಂಬುಲೆನ್ಸ್ ತಡೆದು ಪ್ರತಿಭಟಿಸಿದ್ದಾರೆ.

