ಮೈಸೂರು: ಇಂದು ಅಂತರರಾಷ್ಟ್ರೀಯ ಯೋಗಾ ದಿನಾಚರಣೆ (Internatiuonal Yoga day) ಪ್ರಯುಕ್ತ ನಾನು ಸಂತೋಷದಿಂದ ಯೋಗಾಭ್ಯಾಸ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೇನೆ ಎಂದು ಮೈಸೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ(Mahadevappa) ಹೇಳಿದ್ದಾರೆ.
ಇಂದು ಯೋಗ ದಿನದಂದ ಪ್ರಯುಕ್ತ ಮೈಸೂರಿನಲ್ಲಿ ಯೋಗಾಭ್ಯಾಸ ಮಾಡಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ನಾನು 1985 ರಿಂದಲೂ ಯೋಗವನ್ನು ಮಾಡುತ್ತಿದ್ದೇನೆ. ಹಾಗಾಗಿ ಈ ವಯಸ್ಸಿನಲ್ಲೂ ನಾನು ಆರೋಗ್ಯವಾಗಿದ್ದನೆ. ಯೋಗಾಭ್ಯಾಸ ಪ್ರತಿಯೊಬ್ಬರು ಮಾಡಬೇಕು. ಆರೋಗ್ಯದ ದೃಷ್ಟಿಯಿಂದ ಯೋಗ ಬಹಳ ಒಳ್ಳೆಯದು ಎಂದರು. ಇದನ್ನೂ ಓದಿ: ಹೈದರಾಬಾದ್: ಕಾಂಗ್ರೆಸ್ ಶಾಸಕನ ಪತ್ನಿ, ಶಾಲಾ ಶಿಕ್ಷಕಿ ನೇಣಿಗೆ ಶರಣು
ಪೆಟ್ರೊಲ್,ಡೀಸಲ್ ಅಗತ್ಯ ವಸ್ತುಗಳ ಬೆಲೆ ಏರಿಕೆ ಕುರಿತು ವಿಪಕ್ಷಗಳ ಟೀಕೆ ವಿಚಾರದ ಬಗ್ಗೆ ಮಾತನಾಡಿ, ಕ್ರೂಡ್ ಆಯಿಲ್ ಬೆಲೆ ಕಡಿಮೆ ಇದ್ರೂ ಕೂಡ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸಲ್ ಬೆಲೆ ಕಡಿಮೆ ಮಾಡಿಲ್ಲ. ಅಕ್ಕ ಪಕ್ಕದ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಪೆಟ್ರೋಲ್, ಡೀಸಲ್ ಬೆಲೆ ಕಡಿಮೆ ಇದೆ. ವಿಪಕ್ಷಗಳ ಸುಖಾ ಸುಮ್ಮನೆ ಟೀಕೆ ಮಾಡುತ್ತಿವೆ ಅಷ್ಟೇ. ಇದಕ್ಕೆಲ್ಲ ಕಾರಣ ಅವೈಜ್ಞಾನಿಕ ಜಿಎಸ್ಟಿ ಜಾರಿ ಕಾರಣ ಎಂದು ಗುಡುಗಿದ್ದಾರೆ.

ಗ್ಯಾರಂಟಿ ಯೋಜನೆ ರದ್ದು ವದಂತಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ಗ್ಯಾರಂಟಿ ಯೋಜನೆಗಳನ್ನ ನಾವು ರಾಜಕೀಯ ಉದ್ದೇಶಕ್ಕಾಗಿ ತಂದಿಲ್ಲ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ. ಬಡ ಜನರ ಆರ್ಥಿಕ ಸುಧಾರಣೆಗಾಗಿ ತಂದಿರುವ ಈ ಯೋಜನೆಗಳ ಬಗ್ಗೆ ಕೆಲವರು ಟೀಕೆ ಟಿಪ್ಪಣಿ ಮಾಡುತ್ತಾರೆ. ನಿಲ್ಲಿಸುತ್ತಾರೆ ಎಂಬ ವದಂತಿ ಹಬ್ಬಿಸುತ್ತಿದ್ದಾರೆ. ಆದರೆ, ಈ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲಿಸುವ ಮಾತೇ ಇಲ್ಲ. ಜನರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಟಾಂಗ್ ಕೊಟ್ಟಿದ್ದಾರೆ.ಇದನ್ನೂ ಓದಿ: ದಾಲ್ ಸರೋವರ ತೀರದಲ್ಲಿ ನರೇಂದ್ರ ಮೋದಿ ಯೋಗ
ರೇಣುಕಾಸ್ವಾಮಿ ಹತ್ಯೆ ಪ್ರಕರಣ ಕುರಿತು ಮಾತನಾಡಿ, ನೀವು ತಿಳಿದ ಹಾಗೆ ಸಚಿವ ಸಂಪುಟದಲ್ಲಿ ಅದ್ಯಾವುದೇ ಚರ್ಚೆಯೂ ಆಗಿಲ್ಲ. ತಪ್ಪಿತಸ್ಥರಿಗೆ ಕಾನೂನಾತ್ಮಕ ಶಿಕ್ಷೆ ಆಗುತ್ತದೆ. ಆ ನಿಟ್ಟಿನಲ್ಲಿ ಪೋಲಿಸರು ತನಿಖೆ ಮಾಡುತ್ತಿದ್ದಾರೆ ಎಂದು ಹೇಳಿದರು.